alex Certify ಮೋದಿ ಸರ್ಕಾರದಿಂದ ದೇಶದ ಆರ್ಥಿಕತೆಯ ನಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಸರ್ಕಾರದಿಂದ ದೇಶದ ಆರ್ಥಿಕತೆಯ ನಾಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ದೇಶದ ಆರ್ಥಿಕತೆಯನ್ನೇ ನಾಶಗೊಳಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಕೊರೊನಾ ಸೋಂಕು ತಡೆಯಲು ಜಾರಿಗೆ ತಂದ ಲಾಕ್ ಡೌನ್ ವಿಫಲವಾಗಿದೆ. ಜನಸಾಮಾನ್ಯರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಆರ್ಥಿಕ ನೆರವು ನೀಡದೇ ಮೋದಿ ನೇತೃತ್ವದ ಸರ್ಕಾರ ದೇಶದ ಆರ್ಥಿಕತೆಯನ್ನು ನಾಶಗೊಳಿಸಿದೆ ಎಂದು ಆರೋಪಿಸಿದ್ದು, ಇದು ರಾಕ್ಷಸ ಸರ್ಕಾರವಾಗಿದೆ ಎಂದು ದೂರಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಯನ್ನು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ವಿರೋಧಿಸಿದ್ದು, ರಾಜಕೀಯವಾಗಿ ಅಡ್ಡಿಪಡಿಸದೆ ಪರಿಹಾರದ ಭಾಗವಾಗಿ. ಕೊರೋನಾ ನಿಯಂತ್ರಣಕ್ಕೆ ಸಲಹೆ ನೀಡುವ ಮೂಲಕ ಪರಿಹಾರ ಕ್ರಮಗಳ ಭಾಗವಾಗಿರಬೇಕು. ರಾಜಕೀಯವಾಗಿ ಅಡ್ಡಿಪಡಿಸುವ ಪ್ರಯತ್ನ ನಡೆಸಬಾರದು ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಉದ್ದೇಶಪೂರ್ವಕವಾಗಿ ಜನರ ದಿಕ್ಕುತಪ್ಪಿಸುತ್ತಿದೆ. ಸುಳ್ಳು ಮಾಹಿತಿಯನ್ನು ನೀಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...