ಒಂದು ಸಂದರ್ಭದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯನ್ನು ವಿರೋಧಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಈಗ ಇದಕ್ಕಾಗಿ 40,000 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ.
ಇದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ನರೇಗಾ ವಿಚಾರದಲ್ಲಿ ಯು-ಟರ್ನ್ ಹೊಡೆದಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನರೇಗಾ ದೂರದೃಷ್ಟಿಯನ್ನು ಅರ್ಥಮಾಡಿಕೊಂಡಿರುವ ಪ್ರಧಾನಿ ಅದಕ್ಕಾಗಿ ಹೆಚ್ಚುವರಿ 40,000 ಕೋಟಿ ರೂಪಾಯಿ ಅನುದಾನ ನೀಡಿರುವುದಕ್ಕೆ ಅಭಿನಂದಿಸುತ್ತೇನೆ ಎಂದಿದ್ದಾರೆ.