alex Certify ರಸ್ತೆಯಲ್ಲೇ ವಲಸೆ ಕಾರ್ಮಿಕರ ಸಂಕಷ್ಟ ಆಲಿಸಿದ ರಾಹುಲ್ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆಯಲ್ಲೇ ವಲಸೆ ಕಾರ್ಮಿಕರ ಸಂಕಷ್ಟ ಆಲಿಸಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನವದೆಹಲಿಯ ಸುಖದೇವ್ ವಿಹಾರ್ ಫ್ಲೈ ಓವರ್ ಬಳಿ ವಲಸೆ ಕಾರ್ಮಿಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ತಮ್ಮ ಸ್ವಂತ ರಾಜ್ಯಗಳಿಗೆ ವಲಸೆ ಕಾರ್ಮಿಕರು ತೆರಳುತ್ತಿದ್ದು ಅವರನ್ನು ಭೇಟಿಯಾದ ರಾಹುಲ್ ಗಾಂಧಿ ಸಮಾಲೋಚನೆ ನಡೆಸಿದ್ದಾರೆ. ಲಾಕ್ಡೌನ್ ಜಾರಿಯಾಗಿರುವುದರಿಂದ ವಲಸೆ ಕಾರ್ಮಿಕರಿಗೆ ಉದ್ಯೋಗ ಇಲ್ಲದಂತಾಗಿದ್ದು ಸ್ವಂತ ಗ್ರಾಮಗಳಿಗೆ ತೆರಳುತ್ತಿದ್ದಾರೆ.

ಲಕ್ಷಾಂತರ ಕಾರ್ಮಿಕರು ದೆಹಲಿಯಿಂದ ಪ್ರಯಾಣ ಬೆಳೆಸಿದ್ದು ಸುಖದೇವ್ ವಿಹಾರ್ ಫ್ಲೈಓವರ್ ಬಳಿ ಅವರನ್ನು ಭೇಟಿಯಾಗಿ ರಾಹುಲ್ ಗಾಂಧಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಭೇಟಿಯಾಗಿದ್ದ ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವುದು ತಪ್ಪು ಮಾಹಿತಿಯಾಗಿದೆ.

ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ನಿಯಮಗಳ ಪ್ರಕಾರ ಅವರನ್ನು ಕಳುಹಿಸಲಾಗುತ್ತಿದೆ. ಗುಂಪುಗುಂಪಾಗಿ ವಾಹನ ಹತ್ತಲು ಅನುಮತಿಯಿಲ್ಲ. ನಿಬಂಧನೆಗಳಿಗೆ ಒಳಪಟ್ಟು ಕಾರ್ಮಿಕರನ್ನು ಕಳುಹಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...