
ಕೊರೊನಾ ಸಂಕಷ್ಟದ ನಡುವೆಯೂ ಕೇಂದ್ರ ಸರ್ಕಾರ ಯಾವ ರೀತಿಯಲ್ಲಿ ಬಜೆಟ್ ಮಂಡನೆ ಮಾಡಲಿದೆ ಎಂಬ ಚರ್ಚೆ ಕಳೆದ ಕೆಲ ದಿನಗಳಿಂದ ನಡೆಯುತ್ತಲೇ ಇತ್ತು.
ಆದರೆ ಇಂದು ಬಜೆಟ್ ಮಂಡನೆ ಮಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕೃಷಿ, ಆರೋಗ್ಯ, ಕೊರೊನಾ, ಐಟಿ, ಹೆದ್ದಾರಿ ನಿರ್ಮಾಣಕ್ಕೆ ಆದ್ಯತೆ ನೀಡಿದ್ದಾರೆ.
ಅನೇಕರು ಇದನ್ನ ಸಂಕಷ್ಟದ ಸಮಯದಲ್ಲೂ ಮಾಡಿದ ಬೆಸ್ಟ್ ಬಜೆಟ್ ಅಂತಾ ಹೇಳಿದ್ರೆ…. ಇನ್ನೂ ಕೆಲವರು ಸಧ್ಯದಲ್ಲೇ ವಿಧಾನಸಭಾ ಚುನಾವಣೆಗಳನ್ನ ಎದುರಿಸಲಿರುವ ರಾಜ್ಯಗಳಿಗೆ ಮಾತ್ರ ಪ್ರಾಮುಖ್ಯತೆ ನೀಡಲಾಗಿದೆ ಎಂದು ಕುಟುಕಿದ್ದಾರೆ.
ಕೇಂದ್ರ ಬಜೆಟ್: ಯಾವುದು ದುಬಾರಿ….? ಯಾವುದು ಅಗ್ಗ….? ಇಲ್ಲಿದೆ ಸಂಪೂರ್ಣ ಮಾಹಿತಿ
ಆದರೆ ಇವೆಲ್ಲ ವಾದ – ಪ್ರತಿವಾದಗಳ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇರೆಯದ್ದೇ ಕಾರಣಕ್ಕೆ ಸುದ್ದಿಯಾಗಿದ್ದಾರೆ. ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುವ ವೇಳೆ ರಾಹುಲ್ ಗಾಂಧಿ ನಿದ್ದೆ ಮಾಡ್ತಿರುವ ದೃಶ್ಯವೊಂದು ಇದೀಗ ಟ್ರೋಲಿಗರ ಬಾಯಿಗೆ ಆಹಾರವಾಗಿದೆ.
