ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ರೈಲು ನಿಲ್ದಾಣ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ. ದಶಕದ ಹಳೆಯ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದೆ.
ವಿಮಾನ ನಿಲ್ದಾಣದ ಎರಡು ಕಿಲೋಮೀಟರ್ ಅಂತರದಲ್ಲಿ ರೈಲು ನಿಲ್ದಾಣ ನಿರ್ಮಿಸಲಾಗುವುದು. ಈ ಬಗ್ಗೆ ರೈಲ್ವೆ ಸಚಿವ ಪಿಯುಷ್ ಗೋಯಲ್ ಟ್ವೀಟ್ ಮಾಡಿದ್ದಾರೆ. ಏರ್ಪೋರ್ಟ್ ಸಿಬ್ಬಂದಿ ಮತ್ತು ಪ್ರಯಾಣಿಕರಿಗೆ ಇದರಿಂದ ಅನುಕೂಲವಾಗಲಿದೆ.
ನಗರದಿಂದ ವಿಮಾನ ನಿಲ್ದಾಣಕ್ಕೆ ಸುಲಭವಾಗಿ ತೆರಳಲು ಅವಕಾಶ ಸಿಕ್ಕಂತಾಗುತ್ತದೆ. ಟ್ರಾಫಿಕ್ ಕಿರಿಕಿರಿ ಇಲ್ಲದೆ ರೈಲಿನಲ್ಲಿ ಪ್ರಯಾಣಿಸಿ ವಿಮಾನ ನಿಲ್ದಾಣ ತಲುಪಲು ಅನುಕೂಲವಾಗಲಿದೆ.
ವಿಡಿಯೋ ಸಮೇತ ಪಿಯುಷ್ ಗೋಯಲ್ ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ವಿಮಾನ ನಿಲ್ದಾಣ ಸುತ್ತಮುತ್ತ ರೈಲ್ವೆ ನಿಲ್ದಾಣ ಇಲ್ಲವೆಂಬ ಕೊರತೆ ಇತ್ತು. ಇದನ್ನು ನೀಗಿಸಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಿಂದ ವಿಮಾನದಲ್ಲಿ ಪ್ರಯಾಣಿಸುವವರಿಗೆ ರೈಲ್ವೇ ಇಲಾಖೆ ಉಡುಗೊರೆ ಇದಾಗಿದ್ದು, ದಶಕದ ಬೇಡಿಕೆಯನ್ನು ಈಡೇರಿಸಲಾಗುವುದು. ರಸ್ತೆ ಸಂಚಾರ ಬದಲಿಗೆ ಆರಾಮಾಗಿ ರೈಲ್ ನಲ್ಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬಹುದು ಎಂದು ಸಚಿವರು ತಿಳಿಸಿದ್ದಾರೆ.