ನವದೆಹಲಿ: ರೈಲು ಪ್ರಯಾಣಕ್ಕೆ ಮಾರ್ಗಸೂಚಿ ಬಿಡುಗಡೆಮಾಡಲಾಗಿದೆ. ಮಾರ್ಗಸೂಚಿ ಪಾಲಿಸದಿದ್ದರೆ ದಂಡದ ಜೊತೆಗೆ ಜೈಲುಶಿಕ್ಷೆ ವಿದಿಸಲಾಗುವುದು.
ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಸೋಂಕಿತರು ರೈಲು ನಿಲ್ದಾಣಕ್ಕೆ ಪ್ರವೇಶಿಸುವಂತಿಲ್ಲ. ರೈಲು ನಿಲ್ದಾಣದ ಬಳಿ ಆರೋಗ್ಯ ತಪಾಸಣೆ ಕಡ್ಡಾಯವಾಗಿದೆ ಎಂದು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಸೂಚನೆ ಹೊರಡಿಸಿದೆ.
ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಪ್ರಯಾಣಿಕರಿಗೆ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ನಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಹಬ್ಬದ ಸಮಯದಲ್ಲಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕಿದೆ. ಇಲ್ಲವಾದಲ್ಲಿ ಜೈಲುಶಿಕ್ಷೆ ಗ್ಯಾರಂಟಿ ಎಂದು ಹೇಳಲಾಗಿದೆ.