alex Certify ಉದ್ಯೋಗಾಕಾಂಕ್ಷಿಗಳೇ ಗಮನಿಸಿ: 10ನೇ ತರಗತಿ ಪಾಸ್ ಆದವರಿಗೆ ರೈಲ್ವೆಯಲ್ಲಿ ಕೆಲಸದ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: 10ನೇ ತರಗತಿ ಪಾಸ್ ಆದವರಿಗೆ ರೈಲ್ವೆಯಲ್ಲಿ ಕೆಲಸದ ಅವಕಾಶ

ರೈಲ್ವೆಯಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಖುಷಿ ಸುದ್ದಿಯೊಂದಿದೆ.

ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಅವಕಾಶವಿದೆ. 2532 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಕೇಂದ್ರ ರೈಲ್ವೆ ಅರ್ಜಿ ಆಹ್ವಾನಿಸಿದೆ. ಆರ್‌ಆರ್‌ಸಿ ಅಡಿಯಲ್ಲಿ ವಿವಿಧ ವಹಿವಾಟುಗಳಲ್ಲಿ ಈ ನೇಮಕಾತಿ ಮಾಡಲಾಗುವುದು.

ರೈಲ್ವೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಶುರುವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.rrccr.com  ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಮುಂಬೈ, ಪುಣೆ, ನಾಗ್ಪುರ ಮತ್ತು ಸೋಲ್ಪುರ ಸೇರಿದಂತೆ ಹಲವು ಪ್ರದೇಶಗಳಿಗೆ ಈ ನೇಮಕಾತಿ ನಡೆಯಲಿದೆ.

ರೈಲ್ವೆಯಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ 10 ನೇ ಪರೀಕ್ಷೆ ಉತ್ತೀರ್ಣರಾಗಬೇಕು. ಐಟಿಐ ಸರ್ಟಿಫಿಕೆಟ್ ಅವಶ್ಯಕತೆಯಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 15 ವರ್ಷ ಮೇಲ್ಪಟ್ಟಿರಬೇಕು. ಗರಿಷ್ಠ 24 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 100 ರೂಪಾಯಿ ತುಂಬಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 5 ಕೊನೆ ದಿನ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿ ಆಯ್ಕೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...