alex Certify ನೈರುತ್ಯ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೈರುತ್ಯ ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ನವದೆಹಲಿ: ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಈ ಬಾರಿ ವಾಡಿಕೆಯಂತೆ ಜೂನ್ 1 ರಂದು ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ.

ಈ ಮೊದಲು ಜೂನ್ 5 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು, ಬಂಗಾಳಕೊಲ್ಲಿಯಲ್ಲಿ ಉಂಟಾದ ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ಮುಂಗಾರು ಮಾರುತಗಳು ಚುರುಕು ಪಡೆದುಕೊಂಡಿದೆ. ಜೂನ್ 1 ರ ವೇಳೆಗೆ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಲಿವೆ ಎಂದು ಹೇಳಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಮೇ 31 ರಿಂದ ಜೂನ್ 4 ರ ವರೆಗೆ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುತ್ತದೆ. ಈ ರೀತಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುವುದರಿಂದ ಮುಂಗಾರು ಮಾರುತಗಳು ಪ್ರವೇಶಕ್ಕೆ ಅನುಕೂಲಕರವಾದ ವಾತಾವರಣ ನಿರ್ಮಾಣವಾಗಿ ವಾಡಿಕೆಯ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...