ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಇಂದು ಎರಡನೇ ಸಲ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಸಭೆಗೆ ಹಾಜರಾಗುವಂತೆ ಸಚಿನ್ ಪೈಲಟ್ ಬಣಕ್ಕೆ ಸೂಚನೆ ನೀಡಲಾಗಿದೆ.
ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಗೆ ಕಾಂಗ್ರೆಸ್ ಬಾಗಿಲು ತೆರೆದಿದೆ. ಪಕ್ಷದ ವೇದಿಕೆಯಲ್ಲಿಯೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳೋಣ ಎಂದು ಕಾಂಗ್ರೆಸ್ ಹೈಕಮಾಂಡ್ ತಿಳಿಸಿದೆ. ಸಚಿನ್ ಪೈಲಟ್ ಅವರ ಇಂದಿನ ನಡೆಯ ಬಗ್ಗೆ ಭಾರೀ ಕುತೂಹಲ ಮೂಡಿದೆ.
ಪೈಲಟ್ ಅವರಿಗೆ ನೋಟಿಸ್ ನೀಡಿರುವ ವಿಚಾರ, ಗೃಹ ಖಾತೆ, ಬೆಂಬಲಿಗರಿಗೆ ಪ್ರಮುಖ ಖಾತೆಗೆ ಸಚಿನ್ ಪೈಲೆಟ್ ಪಟ್ಟುಹಿಡಿದಿದ್ದಾರೆ. ಇಂದಿನ ಬೆಳವಣಿಗೆ ಭಾರೀ ಕುತೂಹಲ ಮೂಡಿಸಿದ್ದು, ಪಕ್ಷದ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಬಿಕ್ಕಟ್ಟು ಬಗೆಹರಿಸಲು ರಾಜಸ್ತಾನಕ್ಕೆ ದೌಡಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಉಳಿಸಲು ಪ್ರಿಯಾಂಕಾ ಗಾಂಧಿ ಪ್ರಯತ್ನ ನಡೆಸಿದ್ದಾರೆ.