ಕೊರೊನಾ ಸೋಂಕಿನ ಹರಡುವಿಕೆಯನ್ನ ನಿಯಂತ್ರಣಕ್ಕೆ ತರಲಿಕ್ಕೋಸ್ಕರ ರಾಜಸ್ಥಾನ ಸರ್ಕಾರ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. ಪಂಜಾಬ್, ಹರಿಯಾಣ, ಮಧ್ಯಪ್ರದೇಶ ಹಾಗೂ ಗುಜರಾತ್ನಿಂದ ರಾಜ್ಯಕ್ಕೆ ಎಂಟ್ರಿ ಕೊಡುವವರು ಕೊರೊನಾ ನೆಗೆಟಿವ್ ವರದಿಯನ್ನ ಹೊಂದೋದು ಕಡ್ಡಾಯವಾಗಿದೆ.
ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕದ ಪರಿಸ್ಥಿತಿಯ ಬಗ್ಗೆ ರಾಜಸ್ಥಾನ ಸರ್ಕಾರ ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಆಭರಣ ಪ್ರಿಯರಿಗೆ ಬಂಪರ್….! ಕಳೆದ 10 ತಿಂಗಳಲ್ಲಿ 12 ಸಾವಿರ ರೂ. ಇಳಿಕೆ ಕಂಡ ʼಚಿನ್ನʼದ ಬೆಲೆ
ಪಂಜಾಬ್, ಹರಿಯಾಣ, ಮಧ್ಯ ಪ್ರದೇಶ ಹಾಗೂ ಗುಜರಾತ್ನಿಂದ ರಾಜ್ಯಕ್ಕೆ ಬರುವವರು 72 ಗಂಟೆ ಅವಧಿಯೊಳಗಿನ ಕೋವಿಡ್ ನೆಗೆಟಿವ್ ವರದಿ ಹೊಂದೋದು ಕಡ್ಡಾಯವಾಗಿರಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.