ಜೈಪುರ್: ಹೊರ ರಾಜ್ಯದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ರಾಜಸ್ಥಾನದ ಆಲ್ವಾರ್ ಜಿಲ್ಲೆಯ ಭಿವಾಡಿ ಪೂಲ್ ಭಾಗ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ದಾಳಿ ಮಾಡಿದ ಪೊಲೀಸರು 12 ಮಂದಿಯನ್ನು ಬಂಧಿಸಿದ್ದಾರೆ.
9 ಯುವತಿಯರು ಸೇರಿದಂತೆ 12 ಜನರನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ.
ದೆಹಲಿ, ಪಶ್ಚಿಮಬಂಗಾಳ, ಅಸ್ಸಾಮ್ ನಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದು ಅಕ್ರಮ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗ್ರಾಹಕರ ಸೋಗಿನಲ್ಲಿ ತೆರಳಿದ್ದಾರೆ. ಈ ವೇಳೆ ವೇಶ್ಯಾವಾಟಿಕೆ ನಡೆಯುತ್ತಿರುವುದು ಗೊತ್ತಾಗಿ ಸ್ಥಳದಲ್ಲಿದ್ದ ಯುವತಿಯರು ಸೇರಿದಂತೆ 12 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.