
ನವದೆಹಲಿ: ರಾಜ್ಯಸಭೆಯ 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗಳಿಸಿ ಮೇಲುಗೈ ಸಾಧಿಸಿದೆ. ವೈಎಸ್ಆರ್ ಕಾಂಗ್ರೆಸ್ 4, ಕಾಂಗ್ರೆಸ್ ಪಕ್ಷದ 4 ಸದಸ್ಯರು ರಾಜ್ಯಸಭೆಗೆ ಚುನಾಯಿತರಾಗಿದ್ದಾರೆ. ಮೂರು ಸ್ಥಾನ ಇತರೆ ಪಕ್ಷಗಳ ಸದಸ್ಯರು ಜಯಿಸಿದ್ದಾರೆ.
ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಜ್ಯೋತಿರಾಧಿತ್ಯ ಸಿಂಧ್ಯ ಮಧ್ಯಪ್ರದೇಶದಿಂದ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ರಾಝ್ಯಸಭೆಗೆ ಪ್ರವೇಶಿಸಿದ್ದಾರೆ. ಸುಮೇರ್ ಸಿಂಗ್ ಸತತ ಎರಡನೇ ಬಾರಿಗೆ ಗೆಲುವು ಕಂಡಿದ್ದಾರೆ.
ರಾಜಸ್ತಾನದಲ್ಲಿ ಕಾಂಗ್ರೆಸ್ 2, ಬಿಜೆಪಿ ಒಂದು ಸ್ಥಾನದಲ್ಲಿ ಜಯ ಗಳಿಸಿದೆ. ಕಾಂಗ್ರೆಸ್ ಪಕ್ಷದ ಕೆ.ಸಿ. ವೇಣುಗೋಪಾಲ್ ರಾಜಸ್ತಾನದಿಂದ ಚುನಾಯಿತರಾಗಿದ್ದಾರೆ.