ನವದೆಹಲಿ/ಉಡುಪಿ: ಅಯೋಧ್ಯೆಯಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 3 ಅಥವಾ 5 ರಂದು ಭೂಮಿ ಪೂಜೆ ನೆರವೇರಿಸಲಾಗುವುದು.
ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿದೆ. ಈ ಕುರಿತಾಗಿ ದೇಗುಲ ಟ್ರಸ್ಟ್ ನಿರ್ಧಾರ ಕೈಗೊಂಡಿದ್ದು ನವಂಬರ್ 25 ರಿಂದ ಡಿಸೆಂಬರ್ 25ರ ವರೆಗೆ ನಿಧಿ ಸಂಗ್ರಹಿಸಲಾಗುವುದು. ಪ್ರತಿ ವ್ಯಕ್ತಿಯಿಂದ 10 ರೂಪಾಯಿ, ಒಂದು ಕುಟುಂಬದಿಂದ 100 ರೂಪಾಯಿ ದೇಣಿಗೆ ಸಂಗ್ರಹಿಸಲಾಗುವುದು.
ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು ಎಲ್ ಅಂಡ್ ಟಿ ಸಂಸ್ಥೆ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯರಾದ ಪೇಜಾವರ ಶ್ರೀ ಪ್ರಸನ್ನ ತೀರ್ಥ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.
1000 ಕೋಟಿ ರೂಪಾಯಿ ವೆಚ್ಚದಲ್ಲಿ ರಾಮಮಂದಿರ 67 ಎಕರೆ ರಾಮ ಮಂದಿರ ಸಮುಚ್ಚಯವನ್ನು ಅಭಿವೃದ್ಧಿಪಡಿಸಲಾಗುವುದು. ಸುಮಾರು 3 ವರ್ಷದೊಳಗೆ ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.