alex Certify ಶಾಕಿಂಗ್: ಮಹಿಳೆ ಅಪಹರಿಸಿ ಅಪರಿಚಿತ ಸ್ಥಳಕ್ಕೆ ಕರೆದೊಯ್ದ ಗಂಡ, ಸ್ನೇಹಿತರಿಂದಲೇ 2 ದಿನ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಮಹಿಳೆ ಅಪಹರಿಸಿ ಅಪರಿಚಿತ ಸ್ಥಳಕ್ಕೆ ಕರೆದೊಯ್ದ ಗಂಡ, ಸ್ನೇಹಿತರಿಂದಲೇ 2 ದಿನ ಅತ್ಯಾಚಾರ

ಪಿಲಿಭಿಟ್: ಉತ್ತರ ಪ್ರದೇಶದ ಪಿಲಿಭಿಟ್ ನಲ್ಲಿ 28 ವರ್ಷದ ಮಹಿಳೆಯನ್ನು ಅಪಹರಿಸಿದ ಪತಿರಾಯ ಮತ್ತು ಆತನ ಸ್ನೇಹಿತರು ಎರಡು ದಿನ ಅತ್ಯಾಚಾರವೆಸಗಿ ರೈಲ್ವೆ ಟ್ರ್ಯಾಕ್ ಬಳಿ ಆಕೆಯನ್ನು ಎಸೆದು ಹೋಗಿದ್ದಾರೆ.

ಘಟನೆ ಬಗ್ಗೆ ಮಹಿಳೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಏಪ್ರಿಲ್ 24, 2016 ರಲ್ಲಿ ಸರ್ಕಾರಿ ಆಂಬುಲೆನ್ಸ್ ನಲ್ಲಿ ಸೇವೆಯಲ್ಲಿದ್ದ ವ್ಯಕ್ತಿಯನ್ನು ಸಂತ್ರಸ್ತ ಮಹಿಳೆ ಮದುವೆಯಾಗಿದ್ದರು. ಮದುವೆಯಾದ ಕೆಲ ದಿನಗಳ ನಂತರ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ ಗಂಡ ಮಹಿಳೆಗೆ ದೈಹಿಕ ಕಿರುಕುಳ ನೀಡುತ್ತಿದ್ದ.

2018 ರ ಜನವರಿಯಲ್ಲಿ ಮಹಿಳೆ ಗರ್ಭಿಣಿಯಾಗಿದ್ದು ಗಂಡನಿಂದ ಹಲ್ಲೆಗೆ ಒಳಗಾಗಿ ಗರ್ಭಪಾತಕ್ಕೆ ಒಳಗಾಗಿದ್ದಳು. ಈ ಸಂಬಂಧ ಪತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜುಲೈ 24 ರಂದು ಪ್ರಕರಣದ ವಿಚಾರಣೆಗೆ ಸಮಾಲೋಚನಾ ಕೇಂದ್ರದ ಕ್ಯಾಂಪಸ್ ಗೆ ಬಂದಿದ್ದ ಮಹಿಳೆಯನ್ನು ಗಂಡ ಮತ್ತು ಆತನ ಸ್ನೇಹಿತರು ಅಪಹರಿಸಿ ಅಪರಿಚಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಎರಡು ದಿನಗಳ ಕಾಲ ಅತ್ಯಾಚಾರವೆಸಗಿ ಜುಲೈ 26 ರಂದು ಮಹಿಳೆಯನ್ನು ಜಹಾನಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಹಿ ರೈಲ್ವೆ ನಿಲ್ದಾಣದ ಹಳಿಗಳ ಮೇಲೆ ಎಸೆದು ಪರಾರಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರಂಭದಲ್ಲಿ ಕೇಸ್ ದಾಖಲಿಸಲು ನಿರಾಕರಿಸಿದ್ದಾರೆ. ಪೊಲೀಸ್ ಅಧೀಕ್ಷಕರ ಗಮನಕ್ಕೆ ತಂದಾಗ ದೂರು ದಾಖಲಿಸಿಕೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...