ಮಹಾರಾಷ್ಟ್ರ ರಾಜಧಾನಿ ಮುಂಬೈ ಮನ್ ಖುರ್ಡ್ ಕೋವಿಡ್ ಆರೈಕೆ ಕೇಂದ್ರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದೀಪೇಶ್ ಸಾಲ್ವಿ(20) ಬಂಧಿತ ಆರೋಪಿಯಾಗಿದ್ದಾನೆ. ಸೋಮವಾರ ತಡರಾತ್ರಿ ಆರೋಪಿ ಇಂತಹ ಕೃತ್ಯವೆಸಗಿದ್ದಾನೆ. ಘಟನೆಯ ನಂತರ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮನ್ ಖುರ್ಡ್ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.