ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯಲ್ಲಿ 20 ವರ್ಷದ ಯುವತಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿದೆ.
ತಾಯಿಯೊಂದಿಗೆ ಅರಣ್ಯ ಪ್ರದೇಶಕ್ಕೆ ಕಟ್ಟಿಗೆ ತರಲು ಹೋಗಿದ್ದ ವೇಳೆಯಲ್ಲಿ ಬೈಕ್ನಲ್ಲಿ ಆಗಮಿಸಿದ ಇಬ್ಬರು ಬಲವಂತವಾಗಿ ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ. ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿದೆ.
ಸಂತ್ರಸ್ತ ಯುವತಿಯ ತಾಯಿ ದೂರು ನೀಡಿದ್ದು ಮುಜಾಫರ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಶೀಘ್ರವೇ ಬಂಧಿಸಲಾಗುವುದು ಎಂದು ಠಾಣಾಧಿಕಾರಿ ರಾಜ್ ಕುಮಾರ್ ರಾಣಾ ಹೇಳಿದ್ದಾರೆ.