alex Certify ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಸಿಹಿ ಸುದ್ದಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಸಿಹಿ ಸುದ್ದಿ’

ನವದೆಹಲಿ: ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನುಕೂಲವಾಗುವಂತೆ ವಿಶೇಷ ಪ್ಯಾಕೇಜ್ ನೀಡಲಾಗಿದ್ದು ಪ್ಯಾಕೇಜಿನಲ್ಲಿ ಜಾರಿಗೊಳಿಸಿದ ಯೋಜನೆಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಎರಡು ತಿಂಗಳು ಪಡಿತರ ಉಚಿತವಾಗಿ ನೀಡಲಾಗುವುದು. ಕೇಂದ್ರ ಮತ್ತು ರಾಜ್ಯಗಳ ಪಡಿತರ ಯೋಜನೆಯ ಫಲಾನುಭವಿಗಳು ಮಾತ್ರವಲ್ಲದೆ ನಗರಪ್ರದೇಶದ ಬಡವರು, ವಲಸೆ ಕಾರ್ಮಿಕರಿಗೆ 2 ತಿಂಗಳು ಉಚಿತವಾಗಿ ಪಡಿತರ ವಿತರಿಸಲಾಗುವುದು. ಪ್ರತಿ ಕುಟುಂಬಕ್ಕೆ 5 ಕೆಜಿ ಇಲ್ಲವೇ ಗೋಧಿ, 1 ಕೆಜಿ ಬೇಳೆ ವಿತರಿಸಲಾಗುವುದು. ಇದಕ್ಕಾಗಿ 3,500 ಕೋಟಿ ರೂಪಾಯಿ ಅನುದಾನ ಕಾಯ್ದಿರಿಸಲಾಗಿದೆ. ಕೇಂದ್ರ ಸರ್ಕಾರವೇ ಸಂಪೂರ್ಣ ಮೊತ್ತವನ್ನು ಭರಿಸಲಿದ್ದು ರಾಜ್ಯಸರ್ಕಾರಗಳಿಗೆ ಫಲಾನುಭವಿಗಳನ್ನು ಗುರುತಿಸುವ ಜವಾಬ್ದಾರಿ ನೀಡಲಾಗಿದೆ. ಸುಮಾರು 8 ಕೋಟಿ ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಹೇಳಲಾಗಿದೆ

ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯಡಿ ದೇಶದ ಯಾವುದೇ ಭಾಗದಲ್ಲಿ ಪಡಿತರ ಪಡೆಯಲು ಅವಕಾಶ ನೀಡಲಾಗಿದೆ. ರೇಷನ್ ಕಾರ್ಡ್ ಪೋರ್ಟಬಿಲಿಟಿಗೆ ಅವಕಾಶ ನೀಡಿದ್ದು ಯಾವುದೇ ರಾಜ್ಯದ ವಲಸೆ ಕಾರ್ಮಿಕರು ತಾವಿರುವ ಸ್ಥಳದಲ್ಲೇ ಪಡಿತರ ಪಡೆದುಕೊಳ್ಳಬಹುದಾಗಿದೆ. ಪಡಿತರ ಚೀಟಿ ಹೊಂದಿರದ ವಲಸೆ ಕಾರ್ಮಿಕರಿಗೆ 5 ಕೆಜಿ ಅಕ್ಕಿ ಅಥವಾ ಗೋಧಿ 1ಕೆಜಿ ಬೇಳೆ ನೀಡಲಾಗುವುದು ಎರಡು ತಿಂಗಳ ಕಾಲ ಉಚಿತವಾಗಿ ಪಡಿತರ ನೀಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...