
ನವದೆಹಲಿ: ಮಂಗಳವಾರ ದೇಶದಲ್ಲಿ ವಿಶ್ವದಾಖಲೆಯ 1.04 ಲಕ್ಷ ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದು ವಿಶ್ವದಲ್ಲಿ ಯಾವುದೇ ದೇಶದಲ್ಲಿ ಒಂದು ದಿನದಲ್ಲಿ ದಾಖಲಾದ ಅತಿ ಹೆಚ್ಚು ಸೋಂಕಿತರ ಸಂಖ್ಯೆಯಾಗಿದೆ.
ಒಟ್ಟು ಸೋಂಕಿತರ ಸಂಖ್ಯೆ 43.55 ಲಕ್ಷಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 1532 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿ ಇದುವರೆಗೆ 73,838 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 33.86 ಲಕ್ಷ ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲಿ ಶೇಕಡ 62 ರಷ್ಟು ಕೇಸು ದಾಖಲಾಗಿದೆ.