ನವದೆಹಲಿ: ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಕಳೆದ ಮಾರ್ಚ್ ನಿಂದ ಬಂದ್ ಆಗಿರುವ ಶಾಲಾ-ಕಾಲೇಜುಗಳು ಸೆಪ್ಟಂಬರ್ 1ರಿಂದ ಆರಂಭವಾಗುವ ಸಾಧ್ಯತೆಯಿದೆ.
ಹಂತಹಂತವಾಗಿ ಶಾಲೆ, ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಆಗಸ್ಟ್ ಅಂತ್ಯದವರೆಗೆ ಶಾಲಾ, ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿಲ್ಲ. ಸೆಪ್ಟೆಂಬರ್ 1ರಿಂದ ಪಾಳಿ ಪದ್ಧತಿಯಲ್ಲಿ ಶಾಲೆಗಳನ್ನು ನಡೆಸಲು ಚಿಂತನೆ ನಡೆದಿದೆ.
ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ, ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಶಾಲೆ ನಡೆಸಲು ಚರ್ಚೆ ನಡೆಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಹಲವು ನಿಯಮಗಳನ್ನು ಪಾಲಿಸುವುದರೊಂದಿಗೆ ಶಾಲೆಗಳನ್ನು ಆರಂಭಿಸುವ ಸಾಧ್ಯಾಸಾಧ್ಯತೆಗಳ ಕುರಿತು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ನೇತೃತ್ವದ ಸಚಿವರ ತಂಡಕ್ಕೆ ಸಂಬಂಧಿಸಿದ ಕಾರ್ಯದರ್ಶಿಗಳ ಸಭೆಯಲ್ಲಿ ಚಿಂತನೆ ನಡೆದಿದೆ. ಶಾಲೆಗಳ ಆರಂಭದ ಬಗ್ಗೆ ರಾಜ್ಯ ಸರ್ಕಾರಗಳು ನಿರ್ಧಾರ ಕೈಗೊಳ್ಳಲಿವೆ ಎಂದು ಹೇಳಲಾಗಿದೆ.