alex Certify BIG NEWS: ನಿವೃತ್ತಿ ವಯಸ್ಸು ಹೆಚ್ಚಳ ಮಾಡಲು ನಿರ್ಧಾರ, ಅನುಭವ ಬಳಕೆಗೆ ತೀರ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿವೃತ್ತಿ ವಯಸ್ಸು ಹೆಚ್ಚಳ ಮಾಡಲು ನಿರ್ಧಾರ, ಅನುಭವ ಬಳಕೆಗೆ ತೀರ್ಮಾನ

ನವದೆಹಲಿ: ವಾಯುಪಡೆ, ನೌಕಾಪಡೆ, ಭೂಸೇನಾಪಡೆ ಯೋಧರ ನಿವೃತ್ತಿ ವಯಸ್ಸು ಏರಿಕೆ ಮಾಡಲು ನಿರ್ಧರಿಸಲಾಗಿದೆ.

ಪ್ರಸ್ತುತ 15 ವರ್ಷ ಮತ್ತು 17 ವರ್ಷಗಳ ಕಾಲ ಯೋಧರು ಸೇವೆ ಸಲ್ಲಿಸುತ್ತಿದ್ದಾರೆ. ಅವರ ನಿವೃತ್ತಿ ವಯಸ್ಸು ಏರಿಕೆ ಮಾಡಲು ನಿರ್ಧರಿಸಲಾಗಿದ್ದು, ಎಷ್ಟು ವರ್ಷಗಳ ಹೆಚ್ಚಳ ಮಾಡಬೇಕೆನ್ನುವುದು ಇನ್ನೂ ತೀರ್ಮಾನಿಸಿಲ್ಲ ಎಂದು ಜ. ಬಿಪಿನ್ ರಾವತ್ ಹೇಳಿದ್ದಾರೆ.

ಸೇನಾಪಡೆಗಳ ಮಹಾದಂಡನಾಯಕರಾಗಿರುವ ಬಿಪಿನ್ ರಾವತ್ ಈ ಕುರಿತು ಮಾಹಿತಿ ನೀಡಿದ್ದು, ಮೂರು ಸೇನಾಪಡೆ ಯೋಧರ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲಿಯೇ ಹೊಸ ನೀತಿ ಜಾರಿಗೆ ತರಲಾಗುವುದು. ಪ್ರಸ್ತುತ ಇರುವ ನಿಯಮಗಳಿಂದ ತರಬೇತಿ ಹೊಂದಿದ ಅನುಭವ ಮತ್ತು ನುರಿತ ಯೋಧರು ಬೇಗನೆ ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿವೃತ್ತಿ ವಯಸ್ಸು ಏರಿಕೆಗೆ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...