ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರಾಗಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಸಿ.ಬಿ.ಯಿಂದ ಬಂಧನಕ್ಕೊಳಗಾಗಿದ್ದ ಶೋವಿಕ್ ಇದೀಗ ಮೂರು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶೋವಿಕ್ ಕಳೆದ ಅಕ್ಟೋಬರ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರಾದರೂ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು.
ಆದರೀಗ ಎನ್.ಡಿ.ಪಿ.ಎಸ್. ವಿಶೇಷ ನ್ಯಾಯಾಲಯ ಶೋವಿಕ್ ಗೆ ಜಾಮೀನು ಮಂಜೂರು ಮಾಡಿದೆ.