
ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆ ಮುಂದುವರೆರದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ಸೋದರ ಶೋವಿಕ್ ಚಕ್ರವರ್ತಿ ಸೇರಿ ಇಬ್ಬರನ್ನು ಎನ್.ಸಿ.ಬಿ. ಅಧಿಕಾರಿಗಳು ಬಂಧಿಸಿದ್ದಾರೆ.
ಮಾದಕ ದ್ರವ್ಯ ಬಳಕೆಯ ಆರೋಪದಡಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಸೋದರ ಶೋವಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ರಜಪೂತ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡನನ್ನು ಬಂಧಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ತನಿಖೆ ಮುಂದುವರೆದಿದ್ದು, ಶುಕ್ರವಾರ ಎನ್.ಸಿ.ಬಿ. ಅಧಿಕಾರಿಗಳು ಡ್ರಗ್ಸ್ ಜಾಲದೊಂದಿಗೆ ನಂಟು ಹೊಂದಿರುವ ಹಿನ್ನಲೆಯಲ್ಲಿ ದಾಳಿ ಮಾಡಿದ್ದರು.
ಸಹೋದರಿ ರಿಯಾ ಚಕ್ರವರ್ತಿಗಾಗಿ ಬಂಧಿತ ಡ್ರಗ್ ಡೀಲರ್ ಬಸಿತ್ ಪರಿಹಾರ್ ನಿಂದ ಡ್ರಡಗ್ಸ್ ಖರೀದಿಸಿದ್ದಾಗಿ ಶೋವಿಕ್ ಹೇಳಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ರಿಯಾ ಚಕ್ರವರ್ತಿಯನ್ನು ಕೂಡ ಬಂಧಿಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.