alex Certify RSS ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RSS ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಕೊರೊನಾ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಮೋಹನ್‌ ಭಾಗವತ್‌ ಅವರು ಕೊರೊನಾದ ಸಾಮಾನ್ಯ ಗುಣ ಲಕ್ಷಣಗಳನ್ನು ಹೊಂದಿದ್ದು, ಅವರನ್ನು ನಾಗಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಾಗಪುರದ ಕಿಂಗ್ಸ್‌ ವೇ ಆಸ್ಪತ್ರೆಗೆ ಮೋಹನ್‌ ಭಾಗವತ್‌ ಅವರನ್ನು ದಾಖಲಿಸಲಾಗಿದ್ದು, ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಲಾಗಿದೆ. ಅವರು ವೈದ್ಯರು ನೀಡಿರುವ ಸಲಹೆಯಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ಮೂಲಕ ಆರ್.ಎಸ್.‌ಎಸ್. ವಕ್ತಾರರು ತಿಳಿಸಿದ್ದಾರೆ.

ಮಾರ್ಚ್‌ 7 ರಂದು ಮೋಹನ್‌ ಭಾಗವತ್‌ ನಾಗಪುರದ ನ್ಯಾಷನಲ್‌ ಕ್ಯಾನ್ಸರ್‌ ಇನ್‌ ಸ್ಟಿಟ್ಯೂಟ್‌ ನಲ್ಲಿ ಕೊರೊನಾದ ಮೊದಲ ಲಸಿಕೆ ಪಡೆದಿದ್ದರು. ಎರಡನೇ ಹಂತದ ಲಸಿಕೆ ಪಡೆಯುವ ಮುನ್ನ ಅವರಿಗೆ ಕೊರೊನಾ ಸೋಂಕು ತಗುಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...