ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮಹತ್ವದ ಸಂಪುಟ ಸಭೆಯಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತೀರ್ಮಾನಿಸಲಾಗಿದೆ.
28 ವರ್ಷದ ಬಳಿಕ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲು ಕೇಂದ್ರ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಾನವ ಸಂಪನ್ಮೂಲ ಸಚಿವಾಲಯದ ಹೆಸರನ್ನು ಶಿಕ್ಷಣ ಸಚಿವಾಲಯ ಎಂದು ಬದಲಾವಣೆ ಮಾಡಲಾಗಿದೆ.
5ನೇ ತರಗತಿಯವರೆಗೆ ಮಾತೃಭಾಷೆ/ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡಲಾಗುವುದು. ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಂತ್ರಣಕ್ಕೆ ಒಂದೇ ಸಂಸ್ಥೆಯನ್ನು ಸ್ಥಾಪನೆ ಮಾಡಲಾಗುವುದು. ಎಲ್ಲಾ ಖಾಸಗಿ ಹಾಗೂ ಸರ್ಕಾರಿ ವಿಶ್ವವಿದ್ಯಾಲಯಗಳ ಕೋರ್ಸ್ ಗಳ ಪ್ರವೇಶಕ್ಕೆ ಒಂದೇ ಪ್ರವೇಶ ಪರೀಕ್ಷೆ ಇರಲಿದೆ.
ಎಂಫೀಲ್ ಪದವಿಯನ್ನು ರದ್ದು ಮಾಡಲಾಗಿದ್ದು ಮೂರು ವರ್ಷದ ಪದವಿಯನ್ನು ನಾಲ್ಕು ವರ್ಷಕ್ಕೆ ಏರಿಕೆ ಮಾಡಲಾಗುವುದು. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ವಿಧಿಸುವ ಶೈಕ್ಷಣಿಕ ಶುಲ್ಕಗಳಿಗೆ ಗರಿಷ್ಠ ಮಿತಿ ವ್ಯವಸ್ಥೆಯನ್ನು ಜಾರಿ ಮಾಡಲಾಗುತ್ತದೆ. 6ರಿಂದ 14 ವರ್ಷದ ವರೆಗೆ ಇರುವ ಕಡ್ಡಾಯ ಶಿಕ್ಷಣದ ಹಕ್ಕನ್ನು 3ರಿಂದ 18 ವರ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಹೇಳಲಾಗಿದೆ.