alex Certify ಆಶ್ರಮದಲ್ಲೇ ಆಘಾತಕಾರಿ ಘಟನೆ: ಸಾಧುಗಳನ್ನು ಕೂಡಿಹಾಕಿ ಸಾಧ್ವಿ ಮೇಲೆ ಸಾಮೂಹಿಕ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಶ್ರಮದಲ್ಲೇ ಆಘಾತಕಾರಿ ಘಟನೆ: ಸಾಧುಗಳನ್ನು ಕೂಡಿಹಾಕಿ ಸಾಧ್ವಿ ಮೇಲೆ ಸಾಮೂಹಿಕ ಅತ್ಯಾಚಾರ

ರಾಂಚಿ: ಜಾರ್ಖಂಡ್ ಗೋಡ್ಡಾ ಜಿಲ್ಲೆಯ ಆಶ್ರಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ತಡರಾತ್ರಿ ಆಶ್ರಮಕ್ಕೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಆಶ್ರಮದಲ್ಲಿದ್ದವರನ್ನು ರೂಮ್ ನಲ್ಲಿ ಕೂಡಿ ಹಾಕಿ ಸಾಧ್ವಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಜಾರ್ಖಂಡ್ ರಾಜ್ಯದ ಗೋಡ್ಡಾ ಜಿಲ್ಲೆಯ ಮುಫಾಸಿಲ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಪಾಥ್ವಾರ ಗ್ರಾಮದ ಆಶ್ರಮಕ್ಕೆ ಸೋಮವಾರ ರಾತ್ರಿ ನಾಲ್ವರು ದುಷ್ಕರ್ಮಿಗಳು ನುಗ್ಗಿದ್ದು ಆಶ್ರಮದಲ್ಲಿದ್ದ ಸಾಧುಗಳನ್ನು ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ. 38 ವರ್ಷದ ಸಾಧ್ವಿ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ತಡೆಯಲು ಬಂದ ಸಾಧುವೊಬ್ಬರ ಮೇಲೆ ಹಲ್ಲೆ ಮಾಡಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಪರಾರಿಯಾಗಿರುವ ಆರೋಪಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಗೋಡ್ಡಾ ಪೊಲೀಸ್ ವರಿಷ್ಠಾಧಿಕಾರಿ ವೈ.ಎಸ್. ರಮೇಶ್ ಮಾಹಿತಿ ನೀಡಿ, ಪ್ರಕರಣದ ತನಿಖೆ ಕೈಗೊಂಡಿದ್ದು, ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...