
ನವದೆಹಲಿ: ಲೈಂಗಿಕ ಕಾರ್ಯಕರ್ತೆಯರಿಗೆ ಪಡಿತರ ಸಾಮಗ್ರಿ ಒದಗಿಸುವಂತೆ ಸುಪ್ರೀಂಕೋರ್ಟ್ ನಿಂದ ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲಾಗಿದೆ.
ಕೊರೋನಾ ಸಂಕಷ್ಟದ ಕಾರಣ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಗುರುತಿಸಿದ ಲೈಂಗಿಕ ಕಾರ್ಯಕರ್ತೆಯರಿಗೆ ಪಡಿತರ ಸಾಮಗ್ರಿ ಒದಗಿಸಬೇಕೆಂದು ತಿಳಿಸಲಾಗಿದೆ. ಲೈಂಗಿಕ ಕಾರ್ಯಕರ್ತೆಯರನ್ನು ಗುರುತಿಸಲು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಮತ್ತು ಕಾನೂನು ಸೇವಾ ಪ್ರಾಧಿಕಾರಗಳ ನೆರವು ಪಡೆಯುವಂತೆ ತಿಳಿಸಲಾಗಿದೆ.
ಲೈಂಗಿಕ ಕಾರ್ಯಕರ್ತೆಯರ ಗುರುತನ್ನು ಗೌಪ್ಯವಾಗಿಡಬೇಕು. ಅವರಿಗೆ ಅಗತ್ಯವಾದ ಪಡಿತರ ಕೊಡಬೇಕು ಎಂದು ನ್ಯಾಯಮೂರ್ತಿ ಎಲ್. ನಾಗೇಶ್ವರರಾವ್ ನೇತೃತ್ವದ ಪೀಠ ಸೂಚನೆ ನೀಡಿದೆ. ರಾಜ್ಯ ಸರ್ಕಾರಗಳು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ನಿಯಮಗಳನ್ನು ಪಾಲಿಸಬೇಕೆಂದು ತಿಳಿಸಲಾಗಿದೆ.