ನವದೆಹಲಿ: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಪಿಂಚಣಿ, ಆಹಾರ ಸೇರಿ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಹಿರಿಯ ನಾಗರಿಕರಿಗೆ ಸಕಾಲಕ್ಕೆ ಪಿಂಚಣಿ ತಲುಪಿಸಬೇಕು. ವೃದ್ಧಾಶ್ರಮದಲ್ಲಿ ಜೀವನ ನಡೆಸುತ್ತಿರುವ ಹಿರಿಯರಿಗೆ ಪಿಪಿಇ ಕಿಟ್, ಫೇಸ್ ಮಾಸ್ಕ್, ಸ್ಯಾನಿಟೈಸರ್, ಆಹಾರ ಸಾಮಗ್ರಿ ಸೇರಿ ಅಗತ್ಯ ವಸ್ತು ಮತ್ತು ಸುರಕ್ಷತಾ ಸಾಮಗ್ರಿಗಳನ್ನು ಒದಗಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಹಿರಿಯ ನಾಗರಿಕರ ಬಗ್ಗೆ ಕಾಳಜಿವಹಿಸಬೇಕು ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ತಿಳಿಸಿದೆ. ಮಾಜಿ ಕಾನೂನು ಸಚಿವ ಅಶ್ವಿನಿ ಕುಮಾರ್ ಅವರು ಹಿರಿಯ ನಾಗರಿಕರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ಹಿರಿಯ ನಾಗರಿಕರಿಗೆ ಸಕಾಲದಲ್ಲಿ ಪಿಂಚಣಿ ಸೇರಿ ಅಗತ್ಯ ಸೌಲಭ್ಯ ಒದಗಿಸಲು ಸೂಚಿಸಿದೆ.