
ನವದೆಹಲಿ: ಶಾಲೆಗಳ ಪುನಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಶಿಕ್ಷಣ ಇಲಾಖೆಯ ಮಹತ್ವದ ಸಭೆ ಕರೆಯಲಾಗಿದ್ದು, ಕೇಂದ್ರ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸಭೆ ನಡೆಸಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳು ಸಭೆ ನಡೆಸಲಿದ್ದು ಆಗಸ್ಟ್ ನಲ್ಲಿ ಶಾಲೆ ತೆರೆಯುವ ಬಗ್ಗೆ ರಾಜ್ಯಗಳ ಅಭಿಪ್ರಾಯವನ್ನು ಕೇಂದ್ರ ಸರ್ಕಾರ ಪಡೆಯಲಿದೆ.
ಆಗಸ್ಟ್ 15 ರಿಂದ ಶಾಲೆ, ಕಾಲೇಜ್ ಪುನಾರಂಭಿಸಲಾಗುವುದು ಎಂದು ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ. ಅಂತೆಯೇ ಇಂದು ಶಿಕ್ಷಣ ಇಲಾಖೆ ಕಾರ್ಯದರ್ಶಿಗಳು ಸಭೆ ನಡೆಸಲಿದ್ದು, ರಾಜ್ಯ ಸರ್ಕಾರಗಳ ಅಭಿಪ್ರಾಯ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.