ನವದೆಹಲಿ: ಸೆಪ್ಟೆಂಬರ್ ನಿಂದ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರದ ಮಟ್ಟದಲ್ಲಿ ಗಂಭೀರ ಚರ್ಚೆ ನಡೆದಿದೆ. ಆದರೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲವೆನ್ನಲಾಗಿದೆ.
ಕೊರೋನಾ ಕಾರಣದಿಂದಾಗಿ ಕಳೆದ ಮಾರ್ಚ್ ತಿಂಗಳಿಂದ ಶಾಲೆ, ಕಾಲೇಜುಗಳು ನಡೆಯುತ್ತಿಲ್ಲ. ಶೈಕ್ಷಣಿಕ ವರ್ಷ ಆರಂಭವಾಗಿಲ್ಲ. ಸೆಪ್ಟಂಬರ್ ಅಂತ್ಯಕ್ಕೆ ಇಲ್ಲವೇ ಅಕ್ಟೋಬರ್ ನಲ್ಲಿ ಕೊರೋನಾ ನಡುವೆಯೂ ಪ್ರೌಢ ಶಾಲೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಕೊರೋನಾ ಕಾರಣದಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಒಪ್ಪಿಲ್ಲ. ರಾಜ್ಯ ಸರ್ಕಾರಗಳು ಕೂಡ ಶಾಲೆಯ ಆರಂಭಕ್ಕೆ ಹಿಂದೇಟು ಹಾಕುತ್ತಿವೆ. ಕೇಂದ್ರ ಸರ್ಕಾರ ಶಾಲೆಗಳನ್ನು ಪ್ರಾರಂಭಿಸಲು ಯಾವುದೇ ಕಾಲಮಿತಿಯನ್ನು ನಿಗದಿಪಡಿಸಿಲ್ಲ.
ಆದರೆ, ಕೊರೋನಾ ನಡುವೆಯೂ ನಿಯಮಾನುಸಾರ ಶಾಲೆಗಳನ್ನು ನಡೆಸಬಹುದಾದದ ಸಾಧ್ಯಾಸಾದ್ಯತೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸೆಪ್ಟೆಂಬರ್ ನಲ್ಲಿ ಪ್ರೌಢಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಸೆಪ್ಟೆಂಬರ್ ಅಂತ್ಯಕ್ಕೆ ಇಲ್ಲವೇ ಅಕ್ಟೋಬರ್ ನಲ್ಲಿ ಪ್ರೌಢ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರ್ಕಾರಗಳ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.