ನವದೆಹಲಿ: ಆಗಸ್ಟ್ 31 ರ ವರೆಗೆ ಜಾರಿಯಲ್ಲಿರುವಂತೆ ಅನ್ ಲಾಕ್ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದ್ದು ಶಾಲಾ ಕಾಲೇಜುಗಳನ್ನು ಆರಂಭಿಸದಿರಲು ಸೂಚಿಸಿದೆ.
ಹೀಗಿದ್ದರೂ ಅನೇಕ ರಾಜ್ಯಗಳಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಕ್ಕೆ ಸಿದ್ಧತೆಗಳು ಶುರುವಾಗಿವೆ. ಸೆಪ್ಟಂಬರ್ 5ರ ಶಿಕ್ಷಕರ ದಿನಾಚರಣೆಯಂದು ಆಂಧ್ರಪ್ರದೇಶದಲ್ಲಿ ಶಾಲಾ – ಕಾಲೇಜುಗಳನ್ನು ಆರಂಭಿಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಅದೇ ರೀತಿ ಅಸ್ಸಾಂನಲ್ಲಿಯು ಸೆಪ್ಟಂಬರ್ 1 ರಿಂದ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಅಸ್ಸಾಂ ಶಿಕ್ಷಣ ಸಚಿವ ಹಿಮಂತ್ ಬಿಸ್ವ ಶರ್ಮಾ ಈ ಕುರಿತಾಗಿ ಮಾಹಿತಿ ನೀಡಿದ್ದು, ಸೆಪ್ಟಂಬರ್ 1ರಿಂದ ಶಿಕ್ಷಣ ಸಂಸ್ಥೆ ಆರಂಭಿಸಲಾಗುವುದು. ಆದರೆ, ಈ ಕುರಿತ ಅಂತಿಮ ನಿರ್ಧಾರ ಕೇಂದ್ರ ಮಾರ್ಗಸೂಚಿಗಳನ್ನು ಆಧರಿಸಿರುತ್ತದೆ ಎಂದು ತಿಳಿಸಿದ್ದಾರೆ.