alex Certify ಮದುವೆ ಸುಳ್ಳು ಭರವಸೆಯೊಂದಿಗೆ ಸಮ್ಮತಿಯ ಸೆಕ್ಸ್ ಅತ್ಯಾಚಾರ ಅಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಸುಳ್ಳು ಭರವಸೆಯೊಂದಿಗೆ ಸಮ್ಮತಿಯ ಸೆಕ್ಸ್ ಅತ್ಯಾಚಾರ ಅಲ್ಲ

 ಕಟಕ್: ಪರಸ್ಪರ ಸಮ್ಮತಿಯ ಮೇರೆಗೆ ನಡೆಸುವ ಲೈಂಗಿಕತೆ ಅತ್ಯಾಚಾರ ಆಗುವುದಿಲ್ಲ ಎಂದು ಒಡಿಶಾ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮಹಿಳೆ ಸ್ವಂತ ಆಯ್ಕೆಯ ಪುರುಷನ ಜೊತೆ ಸಂಬಂಧ ಬೆಳೆಸುವ ಪ್ರಕರಣಗಳ ಕುರಿತಂತೆ ಅತ್ಯಾಚಾರ ಕಾನೂನಿಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

ಐಪಿಸಿ ಸೆಕ್ಷನ್ 376 ರ ಪ್ರಕಾರ ಯುವಕ-ಯುವತಿ ನಡುವೆ ಒಪ್ಪಿತವಾದ ಸಂಬಂಧವಿದ್ದರೆ ಅದನ್ನು ಅತ್ಯಾಚಾರವೆಂದು ಪರಿಗಣಿಸಲು ಆಗದು ಎಂದು ಹೇಳಲಾಗಿದೆ. ಒಡಿಶಾದ ಕೋರತ್ ಪುರ ಜಿಲ್ಲೆಯಲ್ಲಿ 19 ವರ್ಷದ ಯುವತಿ ಯುವಕನೊಬ್ಬನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ನವೆಂಬರ್ ನಲ್ಲಿ ಯುವಕನನ್ನು ಬಂಧಿಸಲಾಗಿದೆ. ಅಧೀನ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ್ದು, ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ನ್ಯಾಯಮೂರ್ತಿ ಎಸ್. ಕೆ. ಪಾಣಿಗ್ರಹಣಿ ಅಧೀನ ನ್ಯಾಯಾಲಯದ ತೀರ್ಪನ್ನು ವಜಾಗೊಳಿಸಿ ಪರಸ್ಪರ ಸಮ್ಮತಿಯ ಲೈಂಗಿಕತೆ ಅತ್ಯಾಚಾರ ಅಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...