ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸಕ್ಕೆ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳೇ ತುತ್ತಾಗುತ್ತಿರುವ ಸ್ಥಿತಿ ಬಂದಿದೆ. ಕೋವಿಡ್ ಕೇರ್ ಸೆಂಟರ್ ಒಂದರ 80 ವೈದ್ಯರು ಕೊರೊನಾ ಸೋಂಕಿನಿಂದ ಬಳಲುತ್ತಿರುವ ಪ್ರಕರಣ ದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ದೆಹಲಿಯ ಸೂರಜ್ ಆಸ್ಪತ್ರೆಯ 80 ವೈದ್ಯರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಅವರಲ್ಲಿ 12 ವೈದ್ಯರು ಅದೇ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲವರು ಬೇರೆ ಆಸ್ಪತ್ರೆಗೆ ಶಿಫ್ಟ್ ಆಗಿದ್ದರೆ, ಉಳಿದವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.
ಲಾಕ್ ಡೌನ್ ವೇಳೆ ಆನ್ಲೈನ್ ನಲ್ಲಿ ಸಿಗಲ್ಲ ಈ ವಸ್ತು
ಸೂರಜ್ ಆಸ್ಪತ್ರೆಯ 80 ವೈದ್ಯರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಒಪಿಡಿ ಬಂದ್ ಮಾಡಲಾಗಿದೆ. ಎರಡು ದಿನಗಳ ಹಿಂದಷ್ಟೇ ಇದೇ ಆಸ್ಪತ್ರೆಯ ಹಿರಿಯ ಸರ್ಜನ್ ಮಹಾಮಾರಿಗೆ ಬಲಿಯಾಗಿದ್ದರು. ದೆಹಲಿಯಲ್ಲಿ ಸುಮಾರು 300 ವೈದ್ಯರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.