ನವದೆಹಲಿ: ಅಮೇಥಿ ಲೋಕಸಭೆ ಕ್ಷೇತ್ರದ ಸಂಸದೆ, ಕೇಂದ್ರ ಜವಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಸ್ಮೃತಿ ಇರಾನಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಟ್ವಿಟರ್ ನಲ್ಲಿ ಮಾಹಿತಿ ನೀಡಿದ ಸಚಿವೆ ಸ್ಮೃತಿ ಇರಾನಿ, ನನಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಆರೋಗ್ಯ ಚೆನ್ನಾಗಿದೆ. ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಜಾಗೃತೆ ವಹಿಸಬೇಕು. ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ.