ಸಮಾಜವಾದಿ ಪಕ್ಷದ ಸಂಸ್ಥಾಪಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅಸ್ವಸ್ಥಗೊಂಡಿದ್ದು, ಅವರನ್ನು ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಲಾಯಂ ಸಿಂಗ್ ಯಾದವ್ ಹೊಟ್ಟೆ ನೋವಿನಿಂದ ಬಳಲುತ್ತಿರುವುದಾಗಿ ತಿಳಿಸಿದ್ದರಿಂದ ಅವರನ್ನು ಭಾನುವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಬುಧವಾರದಂದು ನಿಯಮಿತ ಪರೀಕ್ಷೆಗಾಗಿ ಮುಲಾಯಂ ಸಿಂಗ್ ಯಾದವ್ ಮೇದಾಂತ ಆಸ್ಪತ್ರೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಯಾವುದೇ ತೊಂದರೆ ಕಂಡು ಬಂದಿರಲಿಲ್ಲ. ಭಾನುವಾರ ಹೊಟ್ಟೆನೋವು ಉಲ್ಬಣಗೊಂಡಿದ್ದರಿಂದ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮುಲಾಯಂ ಸಿಂಗ್ ಯಾದವ್ ಆರೋಗ್ಯ ಕುರಿತು ಪ್ರತಿಕ್ರಿಯೆ ನೀಡಿರುವ ಅವರ ಸಹೋದರ ಶಿವಪಾಲ್ ಸಿಂಗ್ ಯಾದವ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಆರೋಗ್ಯವಾಗಿದ್ದಾರೆ. ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದ ಕುರಿತು ಯಾವುದೇ ಆತಂಕವಿಲ್ಲ ಎಂದು ತಿಳಿಸಿದ್ದಾರೆ.