ಕೊರೊನಾ ಸೋಂಕಿಗೊಳಗಾಗಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನಲೆ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎನ್ನಲಾಗಿದ್ದು, ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
ಕಳೆದ 15 ದಿನಗಳಿಂದ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಸುಬ್ರಮಣ್ಯಂ ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದ ಕಾರಣ 7 ದಿನಗಳ ಹಿಂದೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಆ ಬಳಿಕವೂ ಆರೋಗ್ಯ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣಿಸದಿರುವುದು ಕಳವಳಕ್ಕೆ ಕಾರಣವಾಗಿದೆ.
ಎಸ್.ಪಿ. ಬಾಲಸುಮ್ರಮಣ್ಯಂ ಅವರ ಆರೋಗ್ಯಕ್ಕೆ ಪ್ರಾರ್ಥಿಸಿ ದೇಶ-ವಿದೇಶಗಳಲ್ಲಿರುವ ಕೋಟ್ಯಾಂತರ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದು, ತಮ್ಮ ನೆಚ್ಚಿನ ಗಾಯಕ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತಿದ್ದಾರೆ. ಬಾಲಸುಬ್ರಮಣ್ಯ ಅವರು ಚೇತರಿಸಿಕೊಳ್ಳಲಿ ಎಂಬ ಕಾರಣಕ್ಕೆ ಅವರೇ ಹಾಡಿದ್ದ ಸಾಯಿಬಾಬಾರ ಭಕ್ತಿ ಗೀತೆಗಳನ್ನೂ ಸಹ ಆಸ್ಪತ್ರೆಯ ಐಸಿಯುನಲ್ಲಿ ಹಾಕಲಾಗುತ್ತಿದೆ ಎನ್ನಲಾಗಿದೆ.