
ರಾಜಧಾನಿ ದೆಹಲಿಯ ವಿಕಾಸ್ ಪುರಿ ಫ್ಲೈಓವರ್ ನಿಂದ ಕಾರು ಕೆಳಗುರುಳಿ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿವೆ.
ಗುರುವಾರ ತಡರಾತ್ರಿ 11ಗಂಟೆಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಫ್ಲೈ ಓವರ್ ನಿಂದ ಕೆಳಗೆ ಬಿದ್ದಿದೆ. ಅದಕ್ಕೂ ಮುನ್ನ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.