alex Certify ಬುಟ್ಟ ಬೊಮ್ಮ ಹಾಡಿಗೆ ಹೆಜ್ಜೆ ಹಾಕಿದ ಸ್ಪೈಸ್ ಜೆಟ್ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬುಟ್ಟ ಬೊಮ್ಮ ಹಾಡಿಗೆ ಹೆಜ್ಜೆ ಹಾಕಿದ ಸ್ಪೈಸ್ ಜೆಟ್ ಸಿಬ್ಬಂದಿ

ತೆಲುಗಿನ ಬುಟ್ಟ ಬೊಮ್ಮ ಹಾಡಿಗೆ ಸ್ಪೈಸ್ ಜೆಟ್ ಸಿಬ್ಬಂದಿ ಹೆಜ್ಜೆ ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೈದರಾಬಾದಿನ ರಾಜೀವ ಗಾಂಧಿ ವಿಮಾನ ನಿಲ್ದಾಣದಲ್ಲಿ ಸೆರೆಯಾದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಕೇವಲ 29 ಸೆಕೆಂಡಿನ ಈ ವಿಡಿಯೋದಲ್ಲಿ ಅಲ್ಲು ಅರ್ಜುನ್ ಅಭಿನಯದ ʼಅಲ ವೈಕುಂಠಪುರಮುಲುʼ ಚಿತ್ರದ ಬುಟ್ಟ ಬೊಮ್ಮ ಹಾಡನ್ನು ಎಂಜಾಯ್ ಮಾಡುತ್ತಾ ಕುಣಿದು ಕುಪ್ಪಳಿಸಿ ನೋಡುಗರ ಮನ ಗೆದ್ದಿದ್ದಾರೆ.

ಯೂಟ್ಯೂಬ್‌ನಲ್ಲಿ 500 ದಶಲಕ್ಷ ಮಂದಿ ವೀಕ್ಷಿಸಿ ಮೆಚ್ಚಿರುವ ಈ ಹಾಡಿಗೆ ಮನ ಸೋಲದವರಿಲ್ಲ. ಈ ಹಿಂದೆ ವೈಜಾಗ್ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಏರ್ ಲೈನ್ ಸಿಬ್ಬಂದಿ ಸಹ ಡ್ಯಾನ್ಸ್ ಮಾಡಿದ್ದರು. ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಕುಟುಂಬ ಕೂಡ ನೃತ್ಯ ಮಾಡಿದ ಟಿಕ್ ಟಾಕ್ ವಿಡಿಯೋ ವೈರಲ್ ಆಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...