ಪಬ್ಜಿ ಗೇಮ್ ಆಡಬೇಡವೆಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನ ತಿರುಮಲಗಿರಿ ನಗರದಲ್ಲಿ ನಡೆದಿದೆ.
9ನೇ ತರಗತಿ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನ್ಲೈನ್ ಕ್ಲಾಸ್ ಗಾಗಿ ಮೊಬೈಲ್ ಕೊಡಿಸಿದ್ದು ಆತ ದಿನವಿಡಿ ಪಬ್ಜಿ ಗೇಮ್ ಆಡುತ್ತಿದ್ದ.
ದಿನವೂ ಪಬ್ಜಿ ಗೇಮ್ ಆಡದಂತೆ ತಾಯಿ ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.