ಪಿಎಂ ಕೇರ್ಸ್ ಫಂಡನ್ನು ಎನ್‌ಡಿಆರ್‌ಎಫ್‌ಗೆ ವರ್ಗಾಯಿಸುವ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅರ್ಜಿದಾರರಿಗೆ ಸುಪ್ರೀಂ ಕೋರ್ಟ್‌ನಿಂದ ಹಿನ್ನಡೆಯಾಗಿದೆ. ಪಿಎಂ ಕೇರ್ಸ್ ಫಂಡ್ ಕೂಡ ಚಾರಿಟಿ ಫಂಡ್ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.
ಕೊರೊನಾ ಸೋಂಕಿನ ವಿರುದ್ಧದ ಕಾರ್ಯಾಚರಣೆಗೆ ಬಳಸಲು ನಿಧಿ ಸಂಗ್ರಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಂಡ್ ಸ್ಥಾಪಿಸಿತ್ತು. ಈ ಹಣವನ್ನು ವರ್ಗಾಯಿಸುವ ಅಗತ್ಯವಿಲ್ಲ. ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಎನ್‌ಡಿಆರ್‌ಎಫ್‌ಗೆ ಹಣವನ್ನು ದಾನ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ.
ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಸ್ಥಾಪಿಸಿರುವ ಪಿಎಂ ಕೇರ್ಸ್ ಫಂಡ್ ಟ್ರಸ್ಟ್ ನ ಕಾನೂನುಬದ್ಧತೆ ಕುರಿತು ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿದ್ದ ಕೋರ್ಟ್ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಅರ್ಜಿಯಲ್ಲಿ, ಪಿಎಂ ಕೇರ್ಸ್ ಫಂಡ್‌ನಲ್ಲಿ ಠೇವಣಿ ಇರಿಸಿದ ಹಣವನ್ನು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಎನ್‌ಡಿಆರ್‌ಎಫ್ ನಿಧಿಗೆ ವರ್ಗಾಯಿಸುವಂತೆ ಕೋರಲಾಗಿತ್ತು.