ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿದ್ದು, ಮದ್ಯದಂಗಡಿಗಳಿಗೆ ಅವಕಾಶ ನೀಡಲಾಗಿದೆ. ಮದ್ಯದಂಗಡಿ ತೆರೆಯಬಾರದು ಎಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರ್ಜಿ ವಜಾ ಮಾಡಿ ಅರ್ಜಿ ಸಲ್ಲಿಸಿದವರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಸುಪ್ರೀಂ ಕೋರ್ಟ್ ಗೆ ಇಬ್ಬರು ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. ಪ್ರಚಾರಕ್ಕೆ ಅವರು ಅರ್ಜಿ ಸಲ್ಲಿಸಿದ್ದಾರೆಂದು ಸುಪ್ರೀಂ ಕೋರ್ಟ್ ಹೇಳಿದೆ. ದೇಶದಲ್ಲಿ ಲಾಕ್ ಡೌನ್ ಜಾರಿಗೆ ಬಂದ ಆರಂಭದ ದಿನಗಳಲ್ಲಿ ಮದ್ಯದಂಗಡಿಯನ್ನು ಮುಚ್ಚಲಾಗಿತ್ತು. ಆದ್ರೆ ಆರ್ಥಿಕ ಪರಿಸ್ಥಿತಿ ಸುಧಾರಿಸಿಲು ಕೇಂದ್ರ ಸರ್ಕಾರ ಮದ್ಯದಂಗಡಿ ತೆರೆಯಲು ಅನುಮತಿ ನೀಡಿದೆ.
ಕೊರೊನಾ ಸಂಖ್ಯೆ ಹೆಚ್ಚಿರುವ ಪ್ರದೇಶ ಬಿಟ್ಟು ಮತ್ತೆ ಎಲ್ಲ ಕಡೆ ಮದ್ಯದಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಆದ್ರೆ ಕೆಲ ಷರತ್ತುಗಳನ್ನು ಅನುಸರಿಸಬೇಕು. ಮಾಸ್ಕ್, ಸಾಮಾಜಿಕ ಅಂತರದ ಜೊತೆ ಸಾರ್ವಜನಿಕ ಪ್ರದೇಶದಲ್ಲಿ ಮದ್ಯ, ಗುಟ್ಕಾ ಸೇವನೆ ಹಾಗೂ ಉಗುಳುವಿಕೆಯನ್ನು ನಿಷೇಧಿಸಲಾಗಿದೆ.