ನವದೆಹಲಿ: ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ ಸಮಾನ ಹಕ್ಕು ಇದೆ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. 2005ರ ಹಿಂದು ಉತ್ತರಾಧಿಕಾರಿ ತಿದ್ದುಪಡಿ ಕಾಯ್ದೆ ಜಾರಿಗೆ ಬರುವುದಕ್ಕಿಂತ ಮೊದಲೇ ಹಿಂದು ಅವಿಭಕ್ತ ಕುಟುಂಬದಲ್ಲಿ ತಂದೆ ಮೃತಪಟ್ಟಿದ್ದರೂ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು ಸಿಗುತ್ತದೆ ಎಂದು ಹೇಳಲಾಗಿದೆ.
ಒಂದು ಸಲ ಮಗಳಾದವಳು ಎಂದಿಗೂ ಮಗಳೇ ಆಗಿರುತ್ತಾಳೆ. ಮಗ ಮದುವೆಯಾಗುವವರೆಗೆ ಮಾತ್ರ ಮಗನಾಗಿರುತ್ತಾನೆ. ಪುತ್ರಿಗೆ ತಂದೆಯ ಪಿತ್ರಾರ್ಜಿತ ಆಸ್ತಿಯ ಮೇಲೆ ಆಕೆಯ ಜೀವನ ಪರ್ಯಂತ ಹಕ್ಕು ಇರುತ್ತದೆ.
ಆಕೆ ಜನಿಸಿದ ದಿನಕ್ಕೂ ಹಕ್ಕಿಗೂ ಸಂಬಂಧವಿಲ್ಲ. ಹಾಗೆಯೇ ತಂದೆ ಬದುಕಿರಲಿ, ಇಲ್ಲದಿರಲಿ, ಆಕೆಗೆ ಸಮಾನ ಹಕ್ಕು ಇರುತ್ತದೆ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರಿದ್ದ ತ್ರಿಸದಸ್ಯ ಪೀಠ ಆದೇಶ ನೀಡಿದೆ. ಹಿಂದು ಉತ್ತರಾಧಿಕಾರ ಕಾಯ್ದೆ ಅನ್ವಯ ಗಂಡು ಮಕ್ಕಳಂತೆ ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು ಇದೆ ಎಂದು ಹೇಳಲಾಗಿದೆ.