alex Certify ಶಾಕಿಂಗ್ ನ್ಯೂಸ್: ಖಾಸಗಿ ಆಸ್ಪತ್ರೆಯಲ್ಲೇ ಕೊರೊನಾ ಸೋಂಕಿತೆ ಮೇಲೆ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಖಾಸಗಿ ಆಸ್ಪತ್ರೆಯಲ್ಲೇ ಕೊರೊನಾ ಸೋಂಕಿತೆ ಮೇಲೆ ಲೈಂಗಿಕ ದೌರ್ಜನ್ಯ

ರಾಯ್ ಪುರ: ಛತ್ತೀಸ್ ಗಢದ ರಾಯ್ ಪುರ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆಘಾತಕಾರಿ ಘಟನೆ ನಡೆದಿದೆ.

ರಾವಾಭಟ ಏರಿಯಾದಲ್ಲಿರುವ ಆಸ್ಪತ್ರೆಯಲ್ಲಿ 9 ವರ್ಷದ ಬಾಲಕಿ ಮೇಲೆ ಸ್ವೀಪರ್ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಕೊರೊನಾ ಪಾಸಿಟಿವ್ ಬಂದಿದ್ದ ನಾಗಪುರದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಯ್ ಪುರದಲ್ಲಿರುವ ಮಾವನ ಮನೆಯಲ್ಲಿ ಬಾಲಕಿ ಕೊರೊನಾ ಸೋಂಕು ತಗುಲಿದ್ದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬುಧವಾರ ಆಕೆಯ ಬಳಿ ಬಂದ ಆರೋಪಿ ಕನ್ನಯ್ಯ ನಿಶಾದ್ ಲೈಂಗಿಕ ಕಿರುಕುಳ ನೀಡಿದ್ದಾನೆ.

ಹುಡುಗಿಯ ಬೆಡ್ ಬಳಿ ಬಂದು ಹೊರಗೆ ಕರೆದುಕೊಂಡು ಹೋಗುವುದಾಗಿ ಬಲವಂತ ಮಾಡಿದ್ದಾನೆ. ಸ್ನಾನ ಮಾಡಲು ವಾಶ್ ರೂಮ್ ಗೆ ಹೋದಾಗ ಹಿಂಬಾಲಿಸಿ ಬಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದಾದ ನಂತರ ಬಾಲಕಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಕೊರೊನಾ ಪರೀಕ್ಷೆ ಮಾಡದೆ ಆಕೆಯನ್ನು ಬಿಡುಗಡೆ ಮಾಡಲಾಗಿದ್ದು ರಾಯಪುರ ಎಸ್ಎಸ್ಪಿ ಅಜಯ್ ಯಾದವ್ ತನಿಖೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೊಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...