ಕುಸಿದಿದ್ದ ಕಟ್ಟಡ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ರಕ್ಷಣಾ ಸಿಬ್ಬಂದಿ ನಿಧನಕ್ಕೆ ಸಂತಾಪ ಸೂಚಿಸಿರುವ ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ, ಕೆ. ಶಿವರಾಜನ್ ಹಾಗೂ ಪಿ. ಕೃಷ್ಣಮೂರ್ತಿ ಕುಟುಂಬಕ್ಕೆ 25ಲಕ್ಷ ರೂಪಾಯಿ ಪರಿಹಾರ ಧನ ಘೋಷಣೆ ಮಾಡಿದ್ದಾರೆ.
ಘಟನೆ ಬಗ್ಗೆ ಮಾತನಾಡಿದ ತಮಿಳುನಾಡು ಪೊಲೀಸರು ಶಾರ್ಟ್ ಸರ್ಕ್ಯೂಟ್ನಿಂದಾಗಿ ಹಳೆಯ ಕಟ್ಟಡದಲ್ಲಿ ಬೆಂಕಿ ತಗುಲಿದ್ದು ಮಾತ್ರವಲ್ಲ ಕಟ್ಟಡ ಕುಸಿದು ಬಿದ್ದಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಅಂತಾ ಹೇಳಿದ್ದಾರೆ.
ದುರಂತದಲ್ಲಿ ಕೆಲ ಸಿಬ್ಬಂದಿಗೆ ಗಾಯಗಳಾಗಿವೆ ಅಂತಾ ಖಾಸಗಿ ಮಾಧ್ಯಮ ವರದಿ ಮಾಡಿದೆ. ವಿಷಯ ತಿಳಿಯುತ್ತಿದ್ದಂತೆ ಸಂತಾಪ ವ್ಯಕ್ತಪಡಿಸಿದ ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ ಮೃತರ ಕುಟುಂಬಕ್ಕೆ ಪರಿಹಾರದ ಜೊತೆಗೆ ಕುಟುಂಬದ ಒಬ್ಬ ಸದಸ್ಯನಿಗೆ ಅರ್ಹತೆಯ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಲಾಗುವುದು ಅಂತಾ ಹೇಳಿದ್ದಾರೆ.