ಚೆನ್ನೈ: ತಮಿಳುನಾಡಿನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ, ಮಗ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ.
ಸತ್ತಾನ್ ಕುಲಂ ಪೊಲೀಸ್ ಠಾಣೆಯ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತೂತುಕುಡಿಯ ಸತ್ತಾನ್ ಕುಲಂ ಠಾಣೆಯ ಪೊಲೀಸರು ಲಾಕ್ಡೌನ್ ನಿಯಮ ಉಲ್ಲಂಘನೆ ಆರೋಪದ ಮೇಲೆ ವಿಜಯರಾಜ್ ಮತ್ತು ಅವರ ಪುತ್ರ ಫೆನಿಕ್ಸ್ ಅವರನ್ನು ವಶಕ್ಕೆ ಪಡೆದುಕೊಂಡು ತೀವ್ರತರ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದರು.
ಇದಕ್ಕೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ತನಿಖಾಧಿಕಾರಿಗಳು ಎಫ್ಐಆರ್ ದಾಖಲಿಸಿಕೊಂಡಿದ್ದು, ಸಬ್ ಇನ್ಸ್ಪೆಕ್ಟರ್ ರಘು ಗಣೇಶ್ ಮತ್ತು ಹೆಡ್ ಕಾನ್ಸ್ ಟೇಬಲ್ ಮುರುಗನ್ ಸೇರಿ ನಾಲ್ವರನ್ನು ಬಂಧಿಸಿದ್ದಾರೆನ್ನಲಾಗಿದೆ.