ಚೆನ್ನೈ: ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ 30 ವರ್ಷದ ವ್ಯಕ್ತಿಯೊಬ್ಬ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಜೋಲಾರ್ ಪೇಟೆ ಪೊಲೀಸ್ ಪ್ರಾದೇಶಿಕ ವಲಯ ವ್ಯಾಪ್ತಿಯಲ್ಲಿ ಜಿ. ರಘುಲ್(3) ಎಂಬಾತ ಈ ಕೃತ್ಯವೆಸಗಿದ್ದಾನೆ. ಅರಿಖನ್ ನಗರ ನಿವಾಸಿಯಾಗಿರುವ ಆರೋಪಿ ಅವಿವಾಹಿತನಾಗಿದ್ದು ಪೋಷಕರೊಂದಿಗೆ ವಾಸವಾಗಿದ್ದಾನೆ.
ಮಂಗಳವಾರ ರಾತ್ರಿ ಮದ್ಯಪಾನ ಮಾಡಿ ಮನೆಗೆ ಮರಳಿದ್ದ ಆತನನ್ನು ತಂದೆ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ. ಕಿಟಕಿ ಮುರಿದು ಹೊರಬಂದ ಆರೋಪಿ ಬುಧವಾರ ಬೆಳಗಿನ ಜಾವ 1 ಗಂಟೆ ವೇಳೆಗೆ ತಪ್ಪಿಸಿಕೊಂಡಿದ್ದು ನೆರೆಮನೆಯ 65 ವರ್ಷದ ಮಹಿಳೆ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಮಹಿಳೆ ಆರೋಪಿಯನ್ನು ಕೂಡಿಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆಯನ್ನು ರಕ್ಷಿಸಿ ತಿರುಪತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ರಘುಲ್ ನನ್ನು ಬಂಧಿಸಲಾಗಿದೆ. ಗ್ರಾಮಸ್ಥರು ನೀಡಿರುವ ಮಾಹಿತಿ ಪ್ರಕಾರ ರಘುಲ್ ವಿರುದ್ಧ ಹಲವಾರು ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಜಾನುವಾರುಗಳನ್ನು ಅಪಹರಿಸಿ ಅಸ್ವಾಭಾವಿಕ ಲೈಂಗಿಕ ಸಂಬಂಧ ಬಳಸುತ್ತಿದ್ದ ಎಂದು ಗ್ರಾಮಸ್ಥರು ಹೇಳಿದ್ದಾರೆ. ಆರು ತಿಂಗಳ ಹಿಂದೆ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ತಿಳಿಸಿದ್ದಾರೆ.