ಚೆನ್ನೈ: ಕೊರೋನಾ ಚಿಕಿತ್ಸೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿಬಂದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದರ ನಿಗದಿ ಮಾಡಲಾಗಿದೆ.
ದುಬಾರಿ ಚಿಕಿತ್ಸಾ ದರಕ್ಕೆ ಕಡಿವಾಣ ಹಾಕಲಾಗಿದ್ದು, ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಹಣವನ್ನು ಖಾಸಗಿ ಆಸ್ಪತ್ರೆಗಳು ಪಡೆಯಬಾರದು ಎಂದು ತಮಿಳುನಾಡು ಸರ್ಕಾರ ತಾಕೀತು ಮಾಡಿದೆ.
ಕೊರೋನಾ ಚಿಕಿತ್ಸೆಗಾಗಿ ನಿಗದಿಯಾದ ಖಾಸಗಿ ಆಸ್ಪತ್ರೆಗಳನ್ನು ವಿಭಾಗಿಸಲಾಗಿದ್ದು, ಎಲ್ಲಾ ಆಸ್ಪತ್ರೆಗಳ ಐಸಿಯುನಲ್ಲಿ ಒಂದು ದಿನದ ಚಿಕಿತ್ಸೆಗೆ ಗರಿಷ್ಠ 15,000 ರೂ. ನಿಗದಿಮಾಡಲಾಗಿದೆ. ಎ 1, ಎ 2 ಆಸ್ಪತ್ರೆಗಳಲ್ಲಿ ಪ್ರತಿ ದಿನಕ್ಕೆ ಗರಿಷ್ಠ 7500 ರೂ., ಎ 3, ಎ 4 ಆಸ್ಪತ್ರೆಗಳಲ್ಲಿ ದಿನಕ್ಕೆ ಗರಿಷ್ಠ 5 ಸಾವಿರ ರೂ. ದರ ನಿಗದಿ ಮಾಡಲಾಗಿದೆ.
ಕೊರೋನಾಚಿಕಿತ್ಸೆಯನ್ನು ಮುಖ್ಯಮಂತ್ರಿಗಳ ಆರೋಗ್ಯ ವಿಮಾ ಯೋಜನೆಯಡಿ ತರಲಾಗಿದ್ದು, ಈಗ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ನಿಗದಿ ಮಾಡಲಾಗಿದೆ.