ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಸರ್ಕಾರ, ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್ ಗಳಲ್ಲಿ ಶೇಕಡಾ 100 ರಷ್ಟು ಸೀಟು ಭರ್ತಿಗೆ ಅನುಮತಿ ನೀಡಿದೆ. ಈ ಹಿಂದೆ ಕೋವಿಡ್ ಕಾರಣಕ್ಕೆ ಶೇಕಡಾ 50ರಷ್ಟು ಸೀಟುಗಳ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು.
ದೇಶಕ್ಕೆ ರೂಪಾಂತರಿ ಕೊರೊನಾ ಕಾಲಿಟ್ಟಿದೆ ಎಂಬ ವರದಿಗಳ ನಡುವೆಯೂ ತಮಿಳುನಾಡು ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಇಂತಹ ತೀರ್ಮಾನ ಕೈಗೊಂಡಿದೆ ಎನ್ನಲಾಗುತ್ತಿದೆ.
ಶೇಕಡ 100 ರಷ್ಟು ಸೀಟುಗಳ ಭರ್ತಿಗೆ ತಮಿಳುನಾಡು ಸರ್ಕಾರ ಅನುಮತಿ ನೀಡಿದ್ದರೂ ಸಹ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ ಮೊದಲಾದ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.