
ಚೆನ್ನೈ: ತಮಿಳುನಾಡು ಕೃಷಿ ಸಚಿವ ಆರ್. ದೊರೈಕಣ್ಣು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 72 ವರ್ಷದ ದೊರೆಕಣ್ಣು ಶನಿವಾರ ತಡರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಅರವಿಂದ್ ಸೆಲ್ವರಾಜ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 13 ರಂದು ವಿಲ್ಲೂಪುರಂ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ದೊರೆಕಣ್ಣು ಅವರನ್ನು ಕಾವೇರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ ಜೀವರಕ್ಷಕ ಸಾಧನಗಳ ನೆರವಿನಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು. ಶನಿವಾರ ತಡರಾತ್ರಿ ಅವರು ಮೃತಪಟ್ಟಿದ್ದಾರೆ. 2006, 2011 ಮತ್ತು 2016ರಲ್ಲಿ ತಂಜಾವೂರು ಜಿಲ್ಲೆಯ ಪಾಪನಾಶಂನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಜಯಲಲಿತಾ ಸಂಪುಟದಲ್ಲಿಯೂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.