ಚೆನ್ನೈ: ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಶೇಕಡ 7.5 ರಷ್ಟು ವಿಶೇಷ ಮೀಸಲಾತಿ ಕಲ್ಪಿಸಲು ತಮಿಳುನಾಡು ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಸರ್ಕಾರಿ ಶಾಲೆ ಮಕ್ಕಳಿಗೆ ಮೆಡಿಕಲ್, ಡೆಂಟಲ್ ಕಾಲೇಜುಗಳಲ್ಲಿ ಶೇಕಡಾ 7.5 ರಷ್ಟು ವಿಶೇಷ ಮೀಸಲಾತಿ ಕಲ್ಪಿಸುವ ನೀಟ್ ಮೀಸಲು ವಿಧೇಯಕಕ್ಕೆ ಅಂಕಿತ ಹಾಕಲಾಗಿದೆ.
6 ರಿಂದ 12 ನೇ ತರಗತಿಯವರೆಗೂ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ, ದಂತ ವೈದ್ಯಕೀಯ ಕಾಲೇಜುಗಳಲ್ಲಿ 300 ಎಂಬಿಬಿಎಸ್ ಸೀಟುಗಳು ಮೀಸಲಾಗಿರುತ್ತವೆ. ಒಟ್ಟಾರೆ ಮೀಸಲಾತಿ ಕೋಟಾದ ವ್ಯಾಪ್ತಿಯಲ್ಲಿ ಈ ಮೀಸಲಾತಿಯನ್ನು ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.