alex Certify ಶೀಘ್ರವೇ ಜೈಲಿಂದ ಶಶಿಕಲಾ ರಿಲೀಸ್: ತಮಿಳುನಾಡು ರಾಜಕೀಯದಲ್ಲಿ ಸಂಚಲನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೀಘ್ರವೇ ಜೈಲಿಂದ ಶಶಿಕಲಾ ರಿಲೀಸ್: ತಮಿಳುನಾಡು ರಾಜಕೀಯದಲ್ಲಿ ಸಂಚಲನ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಗೆಳತಿ ಶಶಿಕಲಾ ನಟರಾಜನ್ ಫೆಬ್ರವರಿಯಲ್ಲಿ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

ದಂಡದ ಮೊತ್ತವನ್ನು ಪಾವತಿಸಿದರೆ 2021ರ ಜನವರಿ 27ರಂದು ಶಶಿಕಲಾ ನಟರಾಜನ್ ಬಿಡುಗಡೆಯಾಗಲಿದ್ದಾರೆ ಎನ್ನಲಾಗಿದ್ದು ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಂದಿನ ವರ್ಷ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಅನೇಕ ಹೊಸ ಬೆಳವಣಿಗೆಗಳಿಗೆ ಸಾಕ್ಷಿಯಾಗಲಿದೆ ಎಂದು ಹೇಳಲಾಗಿದೆ.

ಎಐಎಡಿಎಂಕೆ, ಡಿಎಂಕೆ ಜೊತೆಗೆ ರಜನಿಕಾಂತ್, ಕಮಲಹಾಸನ್ ಪಕ್ಷಗಳು ಕೂಡ ವಿಧಾನಸಭೆ ಚುನಾವಣೆಯಲ್ಲಿ ಗಮನಾರ್ಹ ಪಾತ್ರ ನಿರ್ವಹಿಸುವ ಸಾಧ್ಯತೆ ಇದೆ. ಹೀಗಾಗಿ ಈಗಲೂ ಪ್ರಭಾವಿಯಾಗಿರುವ ಶಶಿಕಲಾ ನಟರಾಜನ್ ಜೈಲಿನಿಂದ ಬಿಡುಗಡೆಯಾಗುತ್ತಿರುವ ವಿಚಾರ ತಮಿಳುನಾಡು ರಾಜಕೀಯದಲ್ಲಿ ಸಂಚಲನ ತಂದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...